ಕುಂದಾಪುರ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಯತ್ನ; ಪಶ್ಚಿಮ ಬಂಗಾಳ ಮೂಲದವನ ಸೆರೆ.

ಕುಂದಾಪುರ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಕೃತ್ಯವನ್ನು ಸಾರ್ವಜನಿಕರು ಪತ್ತೆ ಮಾಡಿ ಆರೋಪಿಯನ್ನು ಹಿಡಿದು ಥಳಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬಂಧಿತನನ್ನು ವಿಶ್ವಾಸ್ (35) ಎಂದು ಗುರುತಿಸಲಾಗಿದೆ.
ಕುಂದಾಪುರದ ಚಿಕನ್ಸಾಲ್ ರಸ್ತೆಯಲ್ಲಿ ಬಾಲಕಿ ತನ್ನ ಕುಟುಂಬದೊಡನೆ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಮೇ 31 ರಂದು ರಾತ್ರಿ ಊಟ ಮಾಡಿ ಮನೆಯ ಹಾಲ್ ನಲ್ಲಿ ಹೆಂಡತಿ ಮತ್ತು ಮಕ್ಕಳೊಂದಿಗೆ ಮಲಗಿದ್ದು, ಬೆಳಗಿನ ಜಾವ ಅವರ ಅಪ್ರಾಪ್ತ ವಯಸ್ಸಿನ ಮಗಳು ಬೊಬ್ಬೆ ಹಾಕಿದ್ದು ಎದ್ದು ನೋಡಿದಾಗ ಪಕ್ಕ ಮನೆಯ ವಿಶ್ವಾಸ್ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿರುವುದು ಕಂಡು ಬಂದಿದ್ದು ಈ ಕುರಿತು ಕುಂದಾಪುರ ಪೊಲೀಸರಿಗೆ ಬಾಲಕಿಯ ತಂದೆ ದೂರು ನೀಡಿದ್ದಾರೆ.
ಬಾಲಕಿಯ ಕೂಗು ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ವಿಶ್ವಾಸ್ ನನ್ನು ಥಳಿಸಿ ಪೋಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಯ ತಂದೆಯ ದೂರಿನಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) ವಿವಿಧ ವಿಭಾಗಗಳ ಅಡಿಯಲ್ಲಿ ಕುಂದಾಪುರ ಪೊಲೀಸರು ವಿಶ್ವಾಸ್ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.