
ಪದಾಧಿಕಾರಿಗಳು ಹಾಗೂ ಏಳು ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ಸೆಲೂನ್ಗಳಿಗೆ ಆದಿತ್ಯವಾರ ಹೆಚ್ಚು ಗ್ರಾಹಕರು ಬರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಮತ್ತು ವೃತ್ತಿ ನಿರತರಿಗೆ ನಿಯಮಾವಳಿಗಳನ್ನು ಪಾಲಿಸಲು ಕಷ್ಟ ಸಾಧ್ಯವಾಗಿರುವುದರಿಂದ ಅಲ್ಲದೆ ಮುಂದಿನ ದಿನಗಳಲ್ಲಿ ಕೂಡಾ ಕಡ್ಡಾಯವಾಗಿ ಉಡುಪಿ ಜಿಲ್ಲೆಯಾದ್ಯಂತ ಸೆಲೂನ್ ಗಳನ್ನು ಆದಿತ್ಯವಾರ ಬಂದ್ ಮಾಡಿ ಮಂಗಳವಾರ ತೆರೆಯಲು ಸರ್ವಸದಸ್ಯರ ಸಭೆಯಲ್ಲಿ ನಿರ್ಣಯಿಸಲಾಗಿದೆ, ಎಂದು ಜಿಲ್ಲಾ ಸವಿತಾ ಸಮಾಜದ ಸಭೆಯಲ್ಲಿ ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರು ಭಾಸ್ಕರ್ ಭಂಡಾರಿ ಗುಡ್ಡೆಯಂಗಡಿ ಹಾಗೂ ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಕೋಶಧಿಕಾರಿ ಶೇಖರ್ ಸಾಲ್ಯಾನ್ ರಾಜ್ಯ ಪ್ರತಿನಿಧಿ ವಿಶ್ವನಾಥ್ ಭಂಡಾರಿ ನಿಂಜೂರು ಗೌರವಾಧ್ಯಕ್ಷ ಗೋವಿಂದ ಭಂಡಾರಿ, ಸವಿತಾ ಸಹಕಾರಿಯ ಅಧ್ಯಕ್ಷ ನವೀನ್ಚಂದ್ರ ಭಂಡಾರಿ ತಿಳಿಸಿದ್ದಾರೆ.