ಅಂತಾರಾಷ್ಟ್ರೀಯ
ಇವತ್ತು ಮುಂಬೈನ ಆರ್ಥರ್ ಜೈಲು ಪಾಲಾಗಲಿದ್ದಾರ ವಿಜಯ್ ಮಲ್ಯ?

ಬಹುಕೋಟಿ ಬ್ಯಾಂಕ್ ವಂಚನೆ ಆರೋಪದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯ ರನ್ನು ಇವತ್ತು ಭಾರತಕ್ಕೆ ಕರೆತರುವ ಸಾಧ್ಯತೆಯಿದ್ದು ಮುಂಬೈನ ಆರ್ಥರ್ ಜೈಲಿನಲ್ಲಿಡಲಾಗುತ್ತದೆ ಎನ್ನಲಾಗಿದೆ.
ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.
ಭಾರತವನ್ನು ತೊರೆದು ಮಾರ್ಚ್ 2, 2016 ರಂದು ಬ್ರಿಟನ್‌ಗೆ ಪಲಾಯನ ಮಾಡಿದ ವಿಜಯ್ ಮಲ್ಯ ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.