
ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆಯಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತಂತೆ. .
ಆಸ್ಪತ್ರೆ ವೈದ್ಯರು ಅವರಿಗೆ ಚಿಕಿತ್ಸೆ ನೀಡಲು ತುಂಬಾನೆ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ. ಆದಾಗ್ಯೂ, ಚಿಕಿತ್ಸೆ ಫಲಕಾರಿಯಾಗಿಲ್ಲ. ನಿಯಮಗಳಂತೆ ಅವರ ಸ್ವಾಬ್ ಕಲೆಕ್ಟ್ ಮಾಡಿ ಲ್ಯಾಬ್ ಗೆ ಕಳಿಸಲಾಗಿದೆ. ನಿನ್ನೆಯ ಅನಾರೋಗ್ಯಕ್ಕೆ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ
ಸದ್ಯ ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ.