
ಮಂಡ್ಯ: ಮೈಶುಗರ್ ಕಾರ್ಖಾನೆ ಖಾಸಗೀಕರಣಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೆಂಬಲ ವ್ಯಕ್ತಪಡಿಸಿದ್ದಾರೆ.ಯದುವೀರ್ ಫೇಸ್ಬುಕ್ ನಲ್ಲಿ, ರೈತರು ಬೆಳೆದಿರುವ ಕಬ್ಬನ್ನು ಮಾರಾಟ ಮಾಡಲು ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ ಎಂದು ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ನೀಡಿ ಪೋಸ್ಟ್ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯು ಕಬ್ಬುಬೆಳೆ ಮತ್ತು ಸಕ್ಕರೆ ಉತ್ಪಾದನೆಯಲ್ಲಿ ಸಮಾನವಾಗಿದೆ. ಮೈಶುಗರ್ ಕಾರ್ಖಾನೆಯ ಖಾಸಗೀಕರಣಕ್ಕೆ ನಿರಂತರ ಪ್ರತಿರೋಧ ವ್ಯಕ್ತವಾಗುತ್ತಿರುವುದು ಅರ್ಥವಾಗುವಂತಹದ್ದಾಗಿದೆ. ಮೈಶುಗರ್ ಕಾರ್ಖಾನೆಯನ್ನು ಮೈಸೂರಿನ ಮಹಾರಾಜರು ಸ್ಥಾಪಿಸಿರುವ ಸಕ್ಕರೆ ಕಾರ್ಖಾನೆಯಾಗಿದೆ. ಹೀಗಾಗಿ ರೈತರ ಕಷ್ಟಕ್ಕೆ ಯದುವೀರ್ ಸ್ಪಂದಿಸಿದ್ದು, ಕಾರ್ಖಾನೆ ಖಾಸಗೀಕರಣಕ್ಕೆ ಬೆಂಬಲ ಸೂಚಿಸಿದ್ದಾರೆ.