
ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದಾಗ ತೆಲಂಗಾಣದಲ್ಲಿ ,ತಮಿಳುನಾಡಿ ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು.ಹೀಗಾಗಿ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆಯೇ? ರದ್ದಾಗುತ್ತದೆಯೇ? ಎಂಬ ಪ್ರಶ್ನೆ ಎದುರಾಗಿತ್ತು.
ಈ ಪ್ರಶ್ನೆಗೆ ಖುದ್ದು ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಉತ್ತರಿಸಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇನಿಗದಿಯಾಗಿರುವ , ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದ್ದು ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ನಡೆಸಿಕೊಳ್ಳಿ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.