
ಉಡುಪಿ : ಉಡುಪಿ ಜಿಲ್ಲೆ ಘೋಷಣೆಯಾಗಿ 23 ವರ್ಷ ಕಳೆದರೂ ಜಿಲ್ಲಾ ಆಸ್ಪತ್ರೆಗೆ ಬೇಕಾದ ಸಿಬ್ಬಂದಿಯ ನೇಮಕ ಆಗಿರುವುದಿಲ್ಲ. ಕೋವಿಡ್-19 ಈ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಯ ಅವಶ್ಯಕತೆ ಇರುವುದರಿಂದ ತಕ್ಷಣದಲ್ಲಿ ಜಿಲ್ಲಾ ಆಸ್ಪತ್ರೆಗೆ ಬೇಕಾದಷ್ಟು ಸಿಬ್ಬಂದಿ ನೇಮಕ ಮಾಡಿ ಎಂದು ಶಾಸಕ ಕೆ. ರಘುಪತಿ ಭಟ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಲ್ಲಿ ಮನವಿ ಮಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ರವರು ಇಂದು ದಿ.09.06.2020 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಕೋವಿಡ್ – 19 ಕುರಿತು ಉಡುಪಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗ್ರಾಮೀಣ ಭಾಗಗಳಿಂದ ದಿನಕ್ಕೆ ಸಾವಿರಾರು ಮಂದಿ ರೋಗಿಗಳು ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಅಲ್ಲದೆ ಕೊರೋನಾದ ಈ ಸಂದಿಗ್ಧ ಸ್ಥಿತಿಯಲ್ಲಿ ಜಿಲ್ಲಾಸ್ಪತ್ರೆಯ ಅವಶ್ಯಕತೆ ಇರುವುದರಿಂದ ಸಿಬ್ಬಂದಿ ಕೊರತೆ ಯಿಂದ ಸಮಸ್ಯೆ ಉಂಟಾಗಿದೆ. ಆದ್ದರಿಂದ ತಕ್ಷಣದಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗಳು ಸೇರಿದಂತೆ ಜಿಲ್ಲಾಸ್ಪತ್ರೆಗೆ ಬೇಕಾಗುವ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಮನವಿ ಮಾಡಿದರು.
ಶಾಸಕರ ಮನವಿ ಗೆ ಸ್ಪಂದಿಸಿದ ಸಚಿವರು ಸಂಬಂದಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ತಕ್ಷಣದಲ್ಲಿ ಬೇಕಾದ ಸಿಬ್ಬಂದಿಯ ನೇಮಕ ಮಾಡಲು ಸೂಚಿಸಿದರು.
ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರತಾಪ್ ಹೆಗ್ಡೆ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳಾದ ಪ್ರೀತಿ ಗೆಲ್ಹೋಟ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ವೈದ್ಯಾಧಿಕಾರಿಗಳಾದ ಸುಧೀರ್ ಸೂಡ, ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.