
ಮೈಸೂರು: ಮೈಸೂರು ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಯ ದರ್ಶನ ಸೋಮವಾರದಿಂದ ಆರಂಭವಾಗಿದೆ. ಹೀಗಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ಎರಡನೇ ದಿನದ ದರ್ಶನ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ದಂಪತಿ ಭೇಟಿ ನೀಡಿ ಯದುವೀರ್ ಮತ್ತು ಪತ್ನಿ ತ್ರಿಶಿಕಾ ಕುಮಾರಿ ದೇವಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪೂಜೆ ನಂತರ ಮಾತನಾಡಿದ ಯದುವೀರ್ ಒಡೆಯರು ಜನರ ಆರೋಗ್ಯವೂ ನಮಗೆ ಮುಖ್ಯವಾಗಿದೆ. ಹೀಗಾಗಿ ಜನರ ಸುರಕ್ಷತೆಯನ್ನು ಕಾಪಾಡಿಕೊಂಡು ದೇವಸ್ಥಾನದ ವಿಧಿ-ವಿಧಾನಗಳನ್ನು ಅನುಸರಿಸುವುದು ಉತ್ತಮ ಎಂದು ಹೇಳಿದರು.