
ಚಿಕ್ಕಮಗಳೂರು: ಉತ್ತರ ಭಾರತದ ಕೆಲ ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದ್ದ ಮಿಡತೆಗಳು ಈಗ ಕಾಫಿನಾಡು ಮಲೆನಾಡಿಗೂ ಲಗ್ಗೆ ಇಟ್ಟ ಪರಿಣಾಮ ಮಲೆನಾಡಿನ ಜನರು ಕಂಗಾಲಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ತೆಕ್ಕೂರು ಎಂಬ ಗ್ರಾಮದಲ್ಲಿ ಅಡಿಕೆ ತೋಟಗಳ ಮೇಲೆ ದಾಳಿ ಮಾಡಿರೋ ಮಿಡತೆಗಳು ಅಡಿಕೆ ಮರದ ಗರಿಗಳನ್ನು ಸಂಪೂರ್ಣ ನಾಶ ಮಾಡಿವೆ.