ಬೆಂಗಳೂರು :ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ಆಯೋಜನೆಗೆ ಲಾಕ್ ಡೌನ್ ಮಾರ್ಗಸೂಚಿ ಇದ್ದ ಕಾರಣ ಈ ಅವಕಾಶ ನಿರಾಕರಿಸಿದ್ದ ಸರ್ಕಾರ ಇವತ್ತು ಕೆಲ ಷರತ್ತುಗಳ ಮೇಲೆ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ. ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಲು ಕಾರ್ಯಕ್ರಮ ನಿಗದಿಯಾಗಿತ್ತು.ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಲಾಕ್ ಡೌನ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ರಾಜಕೀಯ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಹೇಳಿ ಸರ್ಕಾರ ಈ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿತ್ತು.ಈ ಮೊದಲು ಲಾಕ್ ಡೌನ್ ಇದ್ದ ಕಾರಣ ಎರಡು ಬಾರಿ ಪದಗ್ರಹಣ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು ,ಈ ಬಗ್ಗೆ ಇವತ್ತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ತಾನು ನಿನ್ನೆ ರಾತ್ರಿ ಡಿಕೆಶಿ ಜೊತೆ ಮಾತನಾಡಿ ಕಾರ್ಯಕ್ರಮ ಮಾಡಿಕೊಳ್ಳಲು ಅನುಮತಿ ನೀಡಿದ್ಧಾಗಿ ತಿಳಿಸಿದ್ದಾರೆ.