
ಕಾರ್ಕಳ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕರಾವಳಿ ಭಾಗದ ಪ್ರಭಾವಿ ಮುಖಂಡನಾಗಿರುವ ಸುನಿಲ್ ಕುಮಾರ್, ಈ ಹಿಂದೆಯೇ ಸಚಿವರಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಚಿವ ಸ್ಥಾನ ಸಿಕ್ಕಿರಲಿಲ್ಲ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದೂವರೆ ವರ್ಷ ಬಾಕಿ ಇರುವುದರಿಂದ ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಅಸ್ತು ಎಂದಿದೆ ಎನ್ನಲಾಗಿದೆ.