ರಾಜ್ಯ
Trending

ಜೂನ್ 14ರಿಂದ ಇ-ಟಿಕೆಟ್ ಮೂಲಕ ಉಚಿತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ !

ಮಂಗಳೂರು: ಲಾಕ್ ಡೌನ್ ನಂತರ  ಹಲವು ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ ಹಾಗೆಯೆ   ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಯ ದೇವಸ್ಥಾನದಲ್ಲೂ ಜೂನ್ 14ರ ಭಾನುವಾರದಿಂದ  ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

ಭಕ್ತರು ದೇವಸ್ಥಾನದ ವೆಬ್ ಸೈಟ್ ಗೆ ಹೋಗಿ ಅಲ್ಲಿ  ಉಚಿತವಾಗಿ ಇ-ಟಿಕೆಟ್ ಮೂಲಕ ತಮ್ಮ ದರ್ಶನದ ಅವಕಾಶವನ್ನು ಕಾದಿರಿಸಬೇಕಾಗುತ್ತದೆ.ಸರ್ಕಾರ ಕೆಲವೊಂದು ನಿಯಮಗಳನ್ನು ರೂಪಿಸಿರುವುದರಿಂದ ಇದನ್ನು ದೇವಸ್ಥಾನದಲ್ಲಿ  ಪಾಲಿಸಲು ಸ್ವಲ್ಪಕಷ್ಟವಾಗಿತ್ತು. ಅದಕ್ಕಾಗಿ ಈ ವ್ಯವಸ್ಥೆ  ಮಾಡಲಾಯಿತು ,ದೇವಸ್ಥಾನವೊಂದು ದೇವರ ದರ್ಶನಕ್ಕೆ ಇ-ಟಿಕೆಟ್ ಮೂಲಕ ಕಾದಿರಿಸುವ ವ್ಯವಸ್ಥೆ ಮಾಡಿರುವುದು ರಾಜ್ಯದಲ್ಲೇ ಮೊದಲಾಗಿದೆ .

ಭಕ್ತರು ವೆಬ್ ಸೈಟ್ ಮೂಲಕ ನೋಂದಾಯಿಸಿ ದೇಗುಲಕ್ಕೆ ಬಂದು ದೇವಿಯ ದರ್ಶನ ಪಡೆಯಬಹುದಾಗಿದೆ.ಪ್ರತಿ 15 ನಿಮಿಷಕ್ಕೆ 60 ಮಂದಿಯಷ್ಟು ದೇವಾಲಯಕ್ಕೆ ಭೇಟಿ ನೀಡಲು ವ್ಯವಸ್ಥೆ ಮಾಡಲಾಗಿದ್ದು, ಬೆಳಿಗ್ಗೆ 7.30ರಿಂದ ಸಂಜೆ 7.30ರತನಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸ್ಥಳೀಯ ಭಕ್ತರಿಗೆ ಇ-ಪಾಸ್ ಇಲ್ಲದೆ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ಗಂಟೆ 6ರಿಂದ 7.30ರವರೆಗಿನ ಒಂದೂವರೆ ಗಂಟೆ ಸಮಯ ನಿಗದಿಪಡಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್ ಮಾಡಿ ಭಕ್ತರನ್ನು ಒಳ ಬಿಡಲಾಗುತ್ತದೆ. ಆದರೆ ದೇವಾಲಯದಲ್ಲಿ ಅನ್ನಪ್ರಸಾದ ಸೇರಿದಂತೆ ಯಾವುದೇ ಸೇವೆಗಳಿಗೆ ಅವಕಾಶ ಇರುವುದಿಲ್ಲ.

 

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker