
ಮಂಗಳೂರು: ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನ ಚಿಕಿತ್ಸೆಯಲ್ಲಿದ್ದ ಮಹಿಳೆಯೊಬ್ಬರು ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಮಹಿಳೆ ವಾರದ ಹಿಂದೆ ರೈಲಿನಲ್ಲಿ ಮುಂಬಯಿಯಿಂದ ಮಂಗಳೂರಿಗೆ ಬಂದಿದ್ದು , ಅವರ ಗಂಟಲ ದ್ರವ ತಪಾಸಣೆ ನಡೆಸಿದಾಗ ವರದಿ ಪಾಸಿಟಿವ್ ಬಂದಿದ್ದು, ಅವರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಗುರುವಾರ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಇವರು ಗಂಡು ಮಗು ವಿಗೆ ಜನ್ಮ ನೀಡಿದ್ದಾರೆ .ಮಗು ಹಾಗೂ ತಾಯಿ ಕ್ಷೇಮವಾಗಿದ್ದು ಯಾವುದೇ ತೊಂದರೆಯಿಲ್ಲ. ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದು ಇದೇ ಮೊದಲ ಪ್ರಕರಣವಾಗಿದೆ ಎಂದು ದ.ಕ. ಜಿಲ್ಲಾಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ತಿಳಿಸಿದ್ದಾರೆ.