ಹಡೀಲು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡುವತ್ತ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಸದಸ್ಯರು…
ಕೊರೊನಾ ಸಂದರ್ಭ ಆಹಾರಕ್ಕಾಗಿ ಪರಿತಪಿಸುತ್ತಿದ್ದ ಕುಟುಂಬಗಳ ಕಂಡು ಕೃಷಿಯತ್ತ ಮನಸ್ಸು ಮಾಡಿದ ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಸದಸ್ಯರು....* *ಹಡೀಲು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡುವತ್ತ..

ಸೇವೆಯನ್ನೇ ತಮ್ಮ ಹವ್ಯಾಸವನ್ನಾಗಿ ಮಾಡಿಕೊಂಡು ತಮ್ಮ ಗ್ರಾಮ ಕ್ಕಾಗಿ ಮತ್ತು ಅಶಕ್ತರ ಪಾಲಿನ ಶಕ್ತಿಯಾಗಿ ಶ್ರಮಿಸುತ್ತಿರುವ ಪಲಿಮಾರ್ ಪಂಚಾಯಿತಿ ವ್ಯಾಪ್ತಿಯ ಅವರಾಲು ಮಟ್ಟು ಪ್ರದೇಶದಲ್ಲಿರುವ ಸಂಘಟನೆ ಶ್ರೀದೇವಿ ಫ್ರೆಂಡ್ಸ್ ಕ್ಲಬ್.
ಅದೆಷ್ಟೋ ಸಮಾಜೋಪಯೋಗಿ ಕಾರ್ಯಗಳನ್ನು ನಿರ್ವಹಿಸಿದ ಸಂಸ್ಥೆ ಇದೀಗ ತಮ್ಮ ಪದೇಶದ ಹಡೀಲು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಲಿದ್ದಾರೆ ಕೊರೋನ ಸಂದರ್ಭ ಹಲವಾರು ಕುಟುಂಬಗಳು ಒಪ್ಪೊತ್ತಿನ ಆಹಾರಕ್ಕಾಗಿ ಪರಿತಪಿಸಿದ್ದನ್ನು ಮನಗಂಡು ಈ ಒಂದು ಆಲೋಚನೆ ಈ ಸಂಘಟನೆಯಲ್ಲಿ ಮೂಡಿ, ಜೊತೆಗೆ ಕೃಷಿಗೆ ಉತ್ತೇಜನ ನೀಡುವುದರೊಂದಿಗೆ, ಕೃಷಿ ಕಾರ್ಯದ ಬಗ್ಗೆ ಯುವಕರಿಗೆ ತಿಳಿಸುವುದರೊಂದಿಗೆ, ಕೃಷಿ ನಂಬಿದ್ದ ಕಾರ್ಮಿಕರನ್ನು ಸೇರಿಸಿಕೊಂಡು ಕೃಷಿ ಕಾರ್ಯ ಮಾಡಬೇಕೆಂಬ ಮಹದಾಸೆ ಇವರದ್ದಾಗಿದೆ. ಪೂರ್ವ ತಯಾರಿಯ ಖರ್ಚು ಕಳೆದು ಬಂದಂತಹ ಅಕ್ಕಿಯನ್ನು ಅಶಕ್ತರಿಗೆ ಮತ್ತು ಬೈ ಹುಲ್ಲನ್ನು ಗೋಶಾಲೆಗೆ ನೀಡಲು ತೀರ್ಮಾನಿಸಿದ್ದಾರೆ. ಇವರ ಈ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.