
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮುಂಗಾರು ಮಳೆ ಜೋರಾಗಿ ಬರುತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಳೆದ ರಾತ್ರಿಯಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಕಾಪು, ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಅತಿಹೆಚ್ಚು ಮಳೆಯಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ಕೂಡ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಈಗಾಗಲೇ ನದಿ ಪಾತ್ರದ ಜನರಿಗೆ ಎಚ್ಚರಿಕೆ ರವಾನಿಸಲಾಗಿದೆ. ಅಲ್ಲದೇ ಸಮುದ್ರ ತೀರಕ್ಕೆ ಸ್ಥಳೀಯರು ಯಾರೂ ತೆರಳದಂತೆ ಸೂಚಿಸಲಾಗಿದೆ.ನಗರ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಚರಂಡಿಗಳು ಉಕ್ಕಿ ಹರಿದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪರಿಣಾಮ ಜನ ಸಂಚಾರಕ್ಕೂ ಕೊಂಚ ವ್ಯತ್ಯಯ ಉಂಟಾಯಿತು.