ರಾಷ್ಟ್ರೀಯ
ದೈನಿಕ ಭಾಸ್ಕರ್ ಪತ್ರಿಕಾ ಕಚೇರಿ ಮೇಲೆ ಆದಾಯ ತೆರಿಗೆ ದಾಳಿ!

ನವದೆಹಲಿ: ಪ್ರಮುಖ ಹಿಂದಿ ದಿನ ಪತ್ರಿಕೆ ದೈನಿಕ ಭಾಸ್ಕರ್ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪತ್ರಿಕಾ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಮೊದಲ ಪ್ರಕರಣ ಇದಾಗಿದೆ.
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಹರಡಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.