
ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ದಿನಾಂಕ 10-07-2020 ರಂದು ಭೇಟಿ ನೀಡಿದರು. ಮನೆಯವರಿಗೆ ಸಾಂತ್ವನ ಹೇಳಿದ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ವರ್ವಾಡಿ ಪ್ರವೀಣ್ ಶೆಟ್ಟಿ ಮತ್ತು ಅಂಬಾಗಿಲು ಗುರುಪ್ರಸಾದ್ ಭಟ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಸಹೋದರರಾದ ಕಲ್ಯಾಣಪುರದ ರೋಹಿತ್ ಪಿಂಟೋ, ಸುಜಿತ್ ಪಿಂಟೋ ಅವರು ನಾಲ್ಕು ತಿಂಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದರು. ಇವರಿಬ್ಬರು ಈ ಕೊಲೆ ಕೇಸ್ ನಲ್ಲಿ ಆರೋಪಿಗಳಾಗಿ ಇರುವುದು ಕುತೂಹಲ ಕೆರಳಿಸಿದೆ ! . ಪ್ರತಿ ಸಾರಿ ಇವರ ರಕ್ಷಣೆಗೆ ನಿಂತವರು ಯಾರೆಂದು ಇನ್ನೂ ತಿಳಿಯಬೇಕಾಗಿದೆ.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನಗರ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ್ ಶೆಟ್ಟಿ ತೆಂಕನಿಡಿಯೂರು ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.