ರಾಷ್ಟ್ರೀಯ
ಕೇದಾರನಾಥ ಯಾತ್ರಿಕರಿದ್ದ ಹೆಲಿಕಾಪ್ಟರ್ ಪತನ: ಆರು ಮಂದಿ ಸಾವು

ಉತ್ತರಾಖಂಡ: ಯಾತ್ರಾರ್ಥಿಗಳನ್ನುಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥ ಬಳಿ ಇಂದು
ಪತನಗೊಂಡ ಪರಿಣಾಮ ಪೈಲಟ್ ಸೇರಿದಂತೆ
ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾರು ಚಟ್ಟಿ ಬಳಿ ಹೆಲಿಕಾಪ್ಟರ್ ಪತನಗೊಂಡಿದ್ದು,
ಈವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇದಾರನಾಥದಿಂದ ಟೇಕಾಫ್ ಆದ ಕೂಡಲೇಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.