ಅಂತಾರಾಷ್ಟ್ರೀಯ
Trending
ದಕ್ಷಿಣ ಕೊರಿಯಾಗೆ ಬೆದರಿಕೆ ಹಾಕಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಹೋದರಿ!
ಸಿಯೋಲ್: ದಕ್ಷಿಣ ಕೊರಿಯಾ ಮೇಲೆ ಸೇನಾ ಕಾರ್ಯಾಚರಣೆ ನಡೆಸುವುದಾಗಿ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಹೋದರಿ ಕಿಮ್ ಯೊ ಜೊಂಗ್ ಗುಡುಗಿದ್ದಾರೆ.
ಉತ್ತರ ಕೊರಿಯಾದ ಪ್ರಭಾವಿ ಮಹಿಳೆಯಾಗಿರುವ ಕಿಮ್ ಯೊ ಜೊಂಗ್, ದಕ್ಷಿಣ ಕೊರಿಯಾ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವುದಾಗಿ ಗುಡುಗಿದ್ದಾರೆ.
ದಕ್ಷಿಣ ಕೊರಿಯಾಕ್ಕೆ ಹೊಂದಿಕೊಂಡಂತಿರುವ ಉತ್ತರ ಕೊರಿಯಾದ ಗಡಿಭಾಗದ ಪ್ರದೇಶಗಳಲ್ಲಿ ಉತ್ತರ ಕೊರಿಯಾ ಸರ್ಕಾರದ ವಿರುದ್ಧ ಕರಪತ್ರಗಳನ್ನು ಹಂಚಿ ಜನರನ್ನು ದಂಗೆ ಏಳಿಸುವ ಪ್ರಯತ್ನ ನಡೆಸಲಾಗುತ್ತಿದೆ. ದಕ್ಷಿಣ ಕೊರಿಯಾ ಅಂತಹ ಪ್ರಯತ್ನಗಳನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದು ಈ ಪಿತೂರಿಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯವನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ಸೇನಾ ಕಾರ್ಯಾಚರಣೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.