
ಇಸ್ಲಾಮಾಬಾದ್: ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ಇಂದು ಬೆಳಗ್ಗೆ 8 ಗಂಟೆಯಿಂದ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದು, ಈ ಕುರಿತು ಭಾರತ ದೂರು ದಾಖಲಿಸಿದೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿರುವ ಹಲವು ಭಾರತೀಯ ರಾಯಭಾರಿಗಳ ಮೇಲೆ ನಿಗಾ ಇರಿಸಲಾಗಿದ್ದು, ಈ ವಿಪರೀತ ಕಣ್ಗಾವಲಿಗೆ ಭಾರತ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಭಾರತೀಯ ರಾಯಭಾರ ಕಚೇರಿಯಿಂದ ಇಬ್ಬರು ಅಧಿಕಾರಿಗಳೇ ನಾಪತ್ತೆಯಾಗಿದ್ದು, ಅಧಿಕಾರಿಗಳ ಪತ್ತೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನವನ್ನು ಭಾರತ ಆಗ್ರಹಿಸಿದೆ.
Two Indian officials working with Indian High Commission in Islamabad (Pakistan) are missing: Sources
— ANI (@ANI) June 15, 2020