
ಬೆಂಗಳೂರು: ರಾಜ್ಯದಲ್ಲಿ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಸಂಪೂರ್ಣವಾಗಿ ತೆರವುಗೊಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವಿಡಿಯೋ ಸಂವಾದವನ್ನು ಸಿಎಂ ನಡೆಸಲಿದ್ದು ಈ ಸಂದರ್ಭದಲ್ಲಿ ಅನ್ಲಾಕ್ ವಿನಾಯಿತಿಯನ್ನು ಕೇಳಲಿದ್ದಾರೆ. ಈ ಕುರಿತಾಗಿ ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಕರ್ನಾಟಕಕ್ಕೆ ಲಾಕ್ಡೌನ್ ಅಗತ್ಯವಿಲ್ಲ. ಹಾಗಾಗಿ ಲಾಕ್ ಡೌನ್ ತೆರವುಗೊಳಿಸಲು ಅನುಮತಿಯನ್ನು ನೆಡಬೇಕು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದೇವೆ. ಹಾಗು ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಿ ಎಂದು ಮನವಿ ಮಾಡಲಿದ್ದೇನೆ ಎಂದರು.
ರಾಜ್ಯದಲ್ಲಿ ಕೋರೋನ ಸೋಂಕು 7000 ದ ಗಡಿಯನ್ನು ದಾಟಿದೆ. ಹೀಗಿದ್ದರೂ ರಾಜ್ಯದಲ್ಲಿ ಸಂಪೂರ್ಣ ಅನ್ಲಾಕ್ ಮಾಡಲು ಸರ್ಕಾರ ಮುಂದಾಗಿರುವುದು ಕುತೂಹಲ ಮೂಡಿಸಿದೆ .