
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 27ರ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 3.7 ಮೀಟರ್ ನಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಜುಲೈ 26ರ ನಂತರ ಮಳೆ ಕಡಿಮೆಯಾಗಲಿದೆ.