ಕರಾವಳಿ
Trending

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಲ್ಲಿ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 20 : ಜಿಲ್ಲೆಗೆ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಿಂದ ಆಗಮಿಸುವವರನ್ನು ಸರಕಾರದ ನಿರ್ದೇಶನದಂತೆ 14 ದಿನಗಳ ಹೋಂ ಕ್ವಾರಂಟೈನ್ ನಲ್ಲಿ ಇರಿಸಿ ಅವರ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ .ಹೋಂ ಕ್ವಾರಂಟೈನ್ ನಲ್ಲಿ ಇರಿಸಿದ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ ನಿಗಧಿತ ಅವಧಿಯಲ್ಲಿ ಮನೆಯಿಂದ ಹೊರಬಂದಲ್ಲಿ ಸೋಂಕು ಸಮುದಾಯಕ್ಕೆ ಹರಡುವ ಸಾಧ್ಯತೆಗಳು ಹೆಚ್ಚಿರುತ್ತವೆ.
ಹೋಂ ಕ್ವಾರಂಟೈನ್ ಉಲ್ಲಂಘನೆ ಪ್ರಕರಣಗಳಲ್ಲಿ ಮೊದಲ ಬಾರಿ ಎಚ್ಚರಿಕೆ ನೀಡಲಾಗುವುದು, 2ನೇ ಉಲ್ಲಂಘನೆಗೆ FIR ದಾಖಲಿಸಲಾಗುವುದು. ಹೋಂ ಕ್ವಾರಂಟೈನ್ ನಿಂದ ಇನ್ನ್ಟಿಟ್ಯೂಷನಲ್ ಕ್ವಾರಂಟೈನ್ ಗೆ ವರ್ಗಾಯಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವುದು ಕಂಡುಬರುತ್ತಿರುವ ಕಾರಣ ಹೋಂ ಕ್ವಾರಂಟೈನ್ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳು ಹೊರಡಿಸಿರುವ ಆದೇಶ ಹಾಗೂ ಕೋವಿಡ್ ರೋಗಗಳನ್ನು ತಡೆಗಟ್ಟುವ ಸಲುವಾಗಿ ಹೊರಡಿಸಲಾಗಿರುವ ಇತರೆ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!