ರಾಷ್ಟ್ರೀಯ
ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ದುಷ್ಕೃತ್ಯ : CRPF ಯೋಧರನ್ನು ಗುರಿಯಾಗಿಸಿ IED ದಾಳಿ

ಜಮ್ಮು ಕಾಶ್ಮೀರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮುಂದುವರೆಸಿದ್ದಾರೆ. ಕಣಿವೆ ರಾಜ್ಯದಲ್ಲಿ ಉಗ್ರರನ್ನು ಸದೆಬಡಿಯಲು ಸೇನಾಪಡೆ ಪಣತೊಟ್ಟಿರುವ ಬೆನ್ನಲ್ಲೇ ಭಯೋತ್ಪಾದಕರು ಮತ್ತೆ ಮತ್ತೆ ತಮ್ಮ ದುಷ್ಕೃತ್ಯ ನಡೆಸಿದ್ದಾರೆ.
ಪುಲ್ವಾಮಾ ಜಿಲ್ಲೆಯ ಗಾಂಗೋ ಪ್ರದೇಶದಲ್ಲಿ ಇಂದು ಭಯೋತ್ಪಾದಕರ ತಂಡ ಸಿ.ಆರ್.ಪಿ.ಎಫ್ ಯೋಧರನ್ನು ಗುರಿಯಾಗಿಸಿ ದಾಳಿ ಐಇಡಿ ಸ್ಪೋಟ ನಡೆಸಿದ್ದಾರೆ. ದುರ್ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದು ಕಡಿಮೆ ತೀವ್ರತೆಯುಳ್ಳ ಐಇಡಿ ಸ್ಪೋಟ ಎಂದು ಸೇನಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೇನೆ ಸುತ್ತುವರೆದಿದ್ದು, ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.