ಕರಾವಳಿ
ಸ್ಕೂಲ್ ಗೆ ನುಗ್ಗಿದ ಕಳ್ಳರು : ನಗದು ಮತ್ತು ಇತರ ವಸ್ತುಗಳು ಕಳವು.

ಕೋಟ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ನುಗ್ಗಿದ ಕಳ್ಳರು 60,000 ರೂ. ನಗದು ಸೇರಿ ಇತರ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ಸಂಭವಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ಬಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಅದರಂತೆ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರ ಕೊಠಡಿಯ ಎದುರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಚೇರಿಯ ಕಪಾಟಿನಲ್ಲಿದ್ದ ಸುಮಾರು 60,000 ಹಣ ಒಂದು ಮೊಬೈಲ್ ಹಾಗೂ ಎಲ್ಲಾ ನೀರಿನ ಟ್ಯಾಪ್ ಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೋಟ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.