
ಮುಂಬೈ: ಮಾದಕವಸ್ತು ನಿಯಂತ್ರಣ ಘಟಕ (ಎನ್ಸಿಬಿ) ಶನಿವಾರ ಕಾಮಿಡಿಯನ್ ಭಾರತಿ ಸಿಂಗ್ ಹಾಗೂ ಅವರ ಪತಿ ಹರ್ಷ್ ಲಿಂಬಚಿಯಾ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಬಳಿಕ ಸಮನ್ಸ್ ನೀಡಿದೆ ಎಂದು ಎಎನ್ಐ ವರದಿ ಮಾಡಿದೆ.
ಭಾರತಿ ಸಿಂಗ್ ಹಾಗೂ ಅವರ ಪತಿ ಡ್ರಗ್ಸ್ ಬಳಸುತ್ತಿದ್ದರೆಂಬ ಕುರಿತು ಶಂಕಿಸಲಾಗಿದೆ ಎಂದು ಸುದ್ದಿಸಂಸ್ಥೆಯನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.