
ಭಾರತೀಯ ಚಿತ್ರರಂಗದ ಖ್ಯಾತ ನಟ ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಇಂದು ಸಂಜೆ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಮಿತಾಬ್ 77 ವರ್ಷದವರಾಗಿದ್ದರೆ, ಅಭಿಷೇಕ್ ಅವರಿಗೆ 44 ವರ್ಷ.
ಟ್ವೀಟ್ ನಲ್ಲಿ ಅಮಿತಾಬ್, ಕುಟುಂಬದ ಎಲ್ಲ ಸದಸ್ಯರು ಮತ್ತು ಸಿಬ್ಬಂದಿಗಳು ಪರೀಕ್ಷೆಗಳಿಗೆ ಒಳಗಾಗಿದ್ದಾರೆ ಮತ್ತು ಅವರ ಫಲಿತಾಂಶಗಳು ಕಾಯುತ್ತಿವೆ ಎಂದು ತಿಳಿಸಿದ್ದಾರೆ.
ಕಳೆದ 10 ದಿನಗಳಲ್ಲಿ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದವರೆಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಅಮಿತಾಬ್ ಕೋರಿ ಟ್ವೀಟ್ ಮಾಡಿದ್ದಾರೆ.













