ದ್ವಿತೀಯ ಪಿಯು ಫಲಿತಾಂಶ: ಉಡುಪಿ –ದ.ಕ ಜಿಲ್ಲೆ ರಾಜ್ಯಕ್ಕೇ ಪ್ರಥಮ-Udupi News
ಬೆಂಗಳೂರು, ಜುಲೈ 14: ಬೆಂಗಳೂರು, ಜುಲೈ 14: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಶಿಕ್ಷಣ ಸಚಿವರು, ಈ ವರ್ಷ ಒಟ್ಟು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
5.56 ಲಕ್ಷ ಮೊದಲ ಸಲ ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 3.84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 91,025 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 25,602 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಶೇಕಡಾ 90.71 ರಷ್ಟು ಫಲಿತಾಂಶ ಪಡೆದಿರುವ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. 81.53ರಷ್ಟು ಫಲಿತಾಂಶ ಹೊಂದಿರುವ ಕೊಡಗು ಎರಡನೇ ಸ್ಥಾನ ಪಡೆದುಕೊಂಡಿದೆ. 80.97 ರಷ್ಟು ಫಲಿತಾಂಶ ಪಡೆದಿರುವ ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.
ಪಿಯುಸಿ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿದೆ. ಜೊತೆಗೆ ವಿದ್ಯಾರ್ಥಿಗಳ ಮೊಬೈಲ್‌ಗೂ ಫಲಿತಾಂರ ಬರಲಿದೆ.
2019ರ ಪಿಯು ಫಲಿತಾಂಶದ ಪ್ರಕಾರ ಶೇ.61.73 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ.66.58ರಷ್ಟು ವಿಜ್ಞಾನ ವಿದ್ಯಾರ್ಥಿಗಳು, ಶೇ.66.39ರಷ್ಟು ವಾಣಿಜ್ಯ ವಿದ್ಯಾರ್ಥಿಗಳು, ಶೇ.50.53ರಷ್ಟು ಕಲಾ ವಿಭಾಗದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.