ಕರಾವಳಿ
ಉಡುಪಿ: ಗಡಿ ಭಾಗ ಬಂದ್ ಮಾಡುವುದು ವ್ಯರ್ಥ ಪ್ರಯತ್ನ ಜಿಲ್ಲೆಯನ್ನು ಲಾಕ್ಡೌನ್ ಮಾಡುವುದೇ ಸೂಕ್ತ-ವಿಶ್ವಾಸ್ ಅಮೀನ್

ಉಡುಪಿ : ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ಕುರಿತಂತೆ ಜಿಲ್ಲೆಯ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸುವ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯಲ್ಲಿ ಲಾಕ್ ಡೌನ್ ಬದಲು , ಜಿಲ್ಲೆಯ ಗಡಿಯನ್ನು ಸೀಲ್ ಡೌನ್ ಮಾಡುವ ಕುರಿತಂತೆ ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.
ಜುಲೈ 15ರ ರಾತ್ರಿ 8 ಗಂಟೆಯಿಂದ 29 ರವರೆಗೆ 14 ದಿನಗಳ ವರೆಗೆ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲಾಗುವುದು , ಆದರೆ ಜಿಲ್ಲೆಯೊಳಗಿನ ಆರ್ಥಿಕ ಚಟುವಟಿಕೆಗಳನ್ನು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಉಡುಪಿಯಲ್ಲಿ ದಿನವೊಂದಕ್ಕೆ ಸರಾಸರಿ 60 ಕ್ಕೂ ಹೆಚ್ಚು ಕೊವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದರೂ ಜಿಲ್ಲಾಡಳಿತ & 5 ಜನ ಶಾಸಕರುಗಳ ಸಭೆಯಲ್ಲಿ ಕೇವಲ ಜಿಲ್ಲಾ ಗಡಿ ಭಾಗ ಸೀಲ್ಡೌನ್ ಮಾಡಲು ನಿರ್ಧರಿಸಿರುವುದು ಮುಂದೇ ಭಾರೀ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. “ಕೋಟೆಯೆಲ್ಲ ಸೂರೆಗೈದ ನಂತರ ದಿಡ್ಡಿ ಬಾಗಿಲು ಮುಚ್ಚಿದರು”ನ್ನುವಂತಾಗಿದೆ ಸೀಲ್ಡೌನ್ ನಿರ್ಧಾರ. ಈಗಾಗಲೇ ಕೊರಾನ ಹಾವಳಿ ಹಳ್ಳಿಗಳಿಗೂ ವ್ಯಾಪಿಸಿರುವುದರಿಂದ ಗಡಿ ಭಾಗ ಬಂದ್ ಮಾಡುವುದು ವ್ಯರ್ಥ ಪ್ರಯತ್ನ, ಜನ ಸಂಚಾರ ನಿಯಂತ್ರಿಸಲು ಜಿಲ್ಲೆಯನ್ನು ಲಾಕ್ಡೌನ್ ಮಾಡುವುದೇ ಸೂಕ್ತಯಂದು ಪ್ರಕಟಣೆಯಲ್ಲಿ ತಿಳಿಸಿದರು.