
ಮಂಗಳೂರು: ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ನೀರು ತುಂಬಿದ ಬಕೆಟ್‌ನ ಒಳಗಡೆ ಬಿದ್ದು ಮೃತಪಟ್ಟಿರುವ ಘಟನೆ ದ.ಕ ಜಿಲ್ಲೆಯ ಕಾಟಿಪಳ್ಳದಲ್ಲಿ ನಡೆದಿದೆ.
ತೋಕೂರು ನಿವಾಸಿ ಪ್ರಸ್ತುತ ಕಾಟಿಪಳ್ಳದಲ್ಲಿ ವಾಸವಿರುವ ನಝೀರ್‌ರವರ ಮಗು ಮೃತಪಟ್ಟಿದೆ. ಮಗುವಿನ ತಾಯಿ ಮನೆ ಕೆಲಸದಲ್ಲಿ ನಿರತರಾಗಿದ್ದರು. ತಂದೆ ಮಗುವನ್ನು ಮಲಗಿಸಿ ಹೊರಗೆ ಹೋಗಿದ್ದರು. ಸ್ವಲ್ಪ ಹೊತ್ತಿನ ಬಳಿಕ ತಾಯಿ ಕೊಠಡಿಗೆ ಬಂದು ನೋಡಿದಾಗ ಮಗು ಇರದಿದ್ದನ್ನು ಗಮನಿಸಿ ಎಲ್ಲಾ ಕಡೆ ಹುಡುಕಾಡಿದ್ದರು. ಬಳಿಕ ಶೌಚಾಲಯಕ್ಕೆ ಹೋಗಿ ನೋಡಿದಾಗ ಮಗು ಬಕೆಟ್‌ನಲ್ಲಿ ತಲೆಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಗು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.