ಕರಾವಳಿ
ಬ್ರೇಕಿಂಗ್: ಉಡುಪಿಯಲ್ಲಿ ನಿಲ್ಲದ ಕೊರೊನಾ ಹಾವಳಿ: ಇಂದು 99 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 99 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ 1650 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 661 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ. , ಇದುವರೆಗೂ 11 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.