
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಸಾಂಗ್ಲಾ ಕಣಿವೆಯಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ ಸೇತುವೆ ಮುರಿದು ಬಿದ್ದಿದ್ದು, 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಭೂಕುಸಿತದ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಬಂಡೆಗಳ ಕೆಳಗಿನ ಕಣಿವೆಯಲ್ಲಿ ಉರುಳಿ ಸೇತುವೆಯ ಒಂದು ಭಾಗ ಮುರಿದು ನದಿಗೆ ಬೀಳುತ್ತಿರುವ ದೃಶ್ಯ ಸೆರೆಯಾಗಿದೆ.