
ಬೆಂಗಳೂರು, ಜು. 29: ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರಕಾರದ ಕ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಕೋಮುವಾದಿ ಪುಂಡರನ್ನು ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೊರೊನ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ. ಮೊದಲು ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ ಆಯುಕ್ತರ ವರ್ಗಾವಣೆ ಮಾಡಿದ್ದೀರಿ, ಈಗ ಕೋಮುವಾದಿ ಪುಂಡರ ರಕ್ಷಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೋನ ವಿರುದ್ಧದ ಹೋರಾಟ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.