ರಾಜ್ಯ

ಮಹಿಳಾ ಉದ್ಯಮಿಗಳಿಗೆ ಎಲ್ಲ ನೆರವು:ಸಿಎಂ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರ ಎಲ್ಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಈ ಭರವಸೆ ನೀಡಿದ್ದಾರೆ.

ಬೆಂಗಳೂರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಹಲವು ಮಹಿಳೆಯರು ಯಶಸ್ವಿ ಉದ್ಯಮಿಗಳಾಗಿ ಗುರುತಿಸಿಕೊಂಡಿದ್ದಾರೆ ಎಂದು ಸಿಎಂ ಹೇಳಿದರು

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!