
ಉಚ್ಚಿಲ: ಮೋಪೆಡ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅರ್ಚಕರೊಬ್ಬರು ಸಾವನ್ನಪ್ಪಿದ ಘಟನೆ ಉಚ್ವಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶ್ರೀ ರಸ್ತು ಹೊಟೇಲ್ ಎದುರು ಇಂದು ಸಂಜೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕ್ವಿಡ್ ಕಾರು, ಮೋಪೆಡ್ ಸವಾರ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹ ಅರ್ಚಕ ಕೃಷ್ಣ ಭಟ್(83 ) ರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ತೀವ್ರ ಗಾಯಗೊಂಡರು.
ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಕೃಷ್ಣ ಭಟ್ ಅವರು ಪತ್ನಿ, ಇಬ್ಬರು ಪುತ್ರರನ್ನು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.