ಕರಾವಳಿ
ಕೋವಿಡ್ ಸೋಂಕಿತ ವ್ಯಕ್ತಿಯ ಮೃತದೇಹ ಕಣ್ಮರೆ ಸುಳ್ಳು ಸುದ್ಧಿ- ಉಡುಪಿ ಜಿಲ್ಲಾಧಿಕಾರಿ

ಕೋರೋನ ಸೋಂಕಿತ ವ್ಯಕ್ತಿಯ ಮೃತದೇಹ ಕಣ್ಮರೆ ಎಂದು ಉಡುಪಿಯ ಖಾಸಗಿ ಸುದ್ಧಿಜಾಲದ ವೆಬ್ಸೈಟ್ ನಲ್ಲಿ ಪ್ರಕಟವಾದ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಸದರಿ ಮೃತದೇಹವನ್ನು ಕೋವಿಡ್ ನಿಯಮದ ಪ್ರಕಾರ ವಿಲೇವಾರಿ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ. ಪ್ರಕರಣದ ಸತ್ಯಾಂಶ ತಿಳಿಯದೆ ಈ ರೀತಿ ಸುಳ್ಳು ಸುದ್ದಿ ಪ್ರಕಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ