
ವಿಶ್ವದಾದ್ಯಂತ ಕೋವಿಡ್-19 ವಿಮುಕ್ತಿಗೆ ಹಾಗೂ ಕೇಂದ್ರ ಗ್ರಹ ಸಚಿವರಾದ ಶ್ರೀ ಅಮಿತ್ ಷಾ, ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಅರೋಗ್ಯ ವೃದ್ಧಿಯಾಗಿ ದೇಶ ಸೇವೆ ಮತ್ತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಾರ್ಥಿಸಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ಉಡುಪಿ ಶ್ರೀ ಕೃಷ್ಣ ಮಠ, ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರರಾದ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ ಮತ್ತು ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.