ರಾಜ್ಯ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ : SDPI ಕಚೇರಿಗಳ ಮೇಲೆ ಸಿಸಿಬಿ ರೇಡ್

ಬೆಂಗಳೂರು : ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಇಂದು ಸಿಸಿಬಿ ಪೊಲೀಸರು ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿರುವಂತ ಮೂರು ಎಸ್ ಡಿ ಪಿ ಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮಹತ್ವದ ಮಾಹಿತಿಯನ್ನು ಕಲೆ ಹಾಕುತಿದ್ದಾರೆ.
ಕಳೆದ ಇತ್ತೀಚೆಗೆ ನಡೆದಂತ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ, ಇಂದು ಸಿಸಿಬಿ ಪೊಲೀಸರು ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ವ್ಯಾಪ್ತಿಯಲ್ಲಿನ ಮೂರು ಎಸ್ ಡಿ ಪಿ ಐ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಕೋರ್ಟ್ ನಿಂದ ವಾರೆಂಟ್ ಪಡೆದು ದಾಳಿ ನಡೆಸಿರುವಂತ ಸಿಸಿಬಿ ಪೊಲೀಸರು, ಎಸ್ ಡಿ ಪಿ ಐ ಕಚೇರಿಯಲ್ಲಿ ಗಲಭೆ ಸಂಬಂಧ ದಾಖಲೆಗಳು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.