ಅನಿಶಾ ಪೂಜಾರಿ ಸಾವಿನ ಪ್ರಕರಣ : ಆರೋಪಿ ಚೇತನ್ ಶೆಟ್ಟಿ ಬಂಧನ…

ಬ್ರಹ್ಮಾವರ : ಉಡುಪಿ ಜಿಲ್ಲೆಯ ಕುಂದಾಪುರ ಸಾಯಿಬ್ರಕಟ್ಟೆಯ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ ಪರಾರಿಯಾಗಿದ್ದ ಆರೋಪಿ ಆಕೆಯ ಪ್ರಿಯಕರ ಚೇತನ್ ಶೆಟ್ಟಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಪ್ರಿಯಕರ ಚೇತನ್ ಶೆಟ್ಟಿಯನ್ನು ಬೆಂಗಳೂರಿನಿಂದ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಪ್ರಕರಣದ ಜಾಡು ಹಿಡಿದ ಬ್ರಹ್ಮಾವರ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದರು. ಈ ನಡುವೆ ಆರೋಪಿ ಮೈಸೂರಿನಲ್ಲಿದ್ದಾನೆ ಎನ್ನುವ ಮಾಹಿತಿ ದೊರಕಿತು. ಈ ನಡುವೆ ಆತ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.
ನಂತರ ಅಲ್ಲಿಂದಲೇ ಪೊಲೀಸರು ಆತನನ್ನು ಸೆ. 2ರ ರಾತ್ರಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡಸುತ್ತಿ ದ್ದಾರೆ. ಬ್ರಹ್ಮಾವರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಚೇತನ್ ಶೆಟ್ಟಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.