ಕರಾವಳಿ

ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಕೆ ರಘುಪತಿ ಭಟ್ ಭಾಗಿ

ಉಡುಪಿ ಸೆ.5 : ಶಿಕ್ಷಕರ ದಿನಾಚರಣಾ ಸಮಿತಿ ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ, ಬ್ರಹ್ಮಾವರ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಉದಯಕುಮಾರ್, ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಮೈರ್ರ್ಮಾಡಿ ಸುಧಾಕರ್ ಶೆಟ್ಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಓ.ಆರ್. ಪ್ರಕಾಶ್, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರವೀಂದ್ರ ಉಪಾಧ್ಯ ಹಾಗೂ ಪ್ರಮುಖರು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!