ರಾಷ್ಟ್ರೀಯ
ಬಿಹಾರದ ದಿಗ್ಗಜ ಮಾಜಿ ಕೇಂದ್ರ ಸಚಿವ ‘ರಘುವಂಶ್ ಪ್ರಸಾದ್ ಸಿಂಗ್’ ನಿಧನ!

ನವದೆಹಲಿ: ಆನಾರೋಗ್ಯದಿಂದ ತುತ್ತಾಗಿದ್ದ ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗಷ್ಟೇ ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಆನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ತಡರಾತ್ರಿ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ವೆಂಟಿಲೇಟರ್ಸಪೋರ್ಟ್ನಲ್ಲಿರಿಸಲಾಗಿತ್ತು. ಆರೋಗ್ಯ ಸುಧಾರಿಸದ ಕಾರಣ ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.