ರಾಷ್ಟ್ರೀಯ
ವೈದ್ಯಕೀಯ ತಪಾಸಣೆಗಾಗಿ ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ದಾಖಲು : ಏಮ್ಸ್ ಸ್ಪಷ್ಟನೆ
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಅಧಿವೇಶನಕ್ಕೂ ಮುನ್ನ ದೇಹದ ಸಂಪೂರ್ಣ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಅಮಿತ್ ಶಾ ಅವರು ಉಸಿರಾಟದ ಸಮಸ್ಯೆಯಿಂದ ಕಳೆದ ರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆ ಸ್ಪಷ್ಟನೆ ನೀಡಿದ್ದು, ಮುಂಗಾರು ಅಧಿವೇಶನಕ್ಕೂ ಮುನ್ನ ದೇಹದ ಸಂಪೂರ್ಣ ತಪಾಸಣೆಗಾಗಿ ಒಂದೆರಡು ದಿನಗಳ ಮಟ್ಟಿಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ. ಇನ್ನು ಅಮಿತ್ ಶಾ ಅವರು ಆಗಸ್ಟ್ 30 ರಂದು ಏಮ್ಸ್ ಆಸ್ಪತ್ರೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.