ರಾಜ್ಯ

ಡಾ. ವಿಷ್ಣುವರ್ಧನ್ ಸ್ಮಾರಕಕ್ಕೆ ನಾಳೆ ಸಿ.ಎಂ. ಯಿಂದ ಚಾಲನೆ

ಬೆಂಗಳೂರು : ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ಮೈಸೂರಿನ ಹೊರ ವಲಯದ ಹೆಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳು 5 ಎಕೆರೆ ನಿವೇಶನದಲ್ಲಿ ಶಿಲಾನ್ಯಾಸ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಉದ್ದೇಶಿತ 5 ಎಕೆರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಕಾರ್ಯಕ್ರಮದಲ್ಲಿ ಡಾ. ಭಾರತಿ ವಿಷ್ಣುವರ್ಧನ್, ಅನಿರುದ್ಧ, ಕೀರ್ತಿ ವಿಷ್ಣುವರ್ಧನ್ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಮಾತನಾಡಿದ ಭಾರತಿ ವಿಷ್ಣುವರ್ಧನ್, ನಾಳೆ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!