ರಾಜ್ಯ
ವೈದ್ಯರು ಯಾವುದೇ ಕಾರಣಕ್ಕೂ ಮುಷ್ಕರ ಮಾಡಬಾರದು : ಸಚಿವ ಬಿ.ಶ್ರೀರಾಮುಲು ಮನವಿ
ಬೆಂಗಳೂರು : ವೈದ್ಯರು ಯಾವುದೇ ಕಾರಣಕ್ಕೂ ಮುಷ್ಕರ ಮಾಡಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ವೇತನ ಹೆಚ್ಚಳ ಮಾಡುವ ವಿಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ವೈದ್ಯರೆಲ್ಲರೂ ಉತ್ತಮ ಕೆಲಸ ಮಾಡಿದ್ದಾರೆ. ಸಂಕಷ್ಟದ ಸಮಯದಲ್ಲಿ ಮುಷ್ಕರ ಮಾಡಿದರೆ ಜನಸಾಮಾನ್ಯರಿಗೆ ಕಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಡಬೇಕು ಎಂದು ಹೇಳಿದರು.
ಈಗಾಗಲೇ ಹಲವು ಬೇಡಿಕೆಗಳಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಂತ ಸರ್ಕಾರಿ ವೈದ್ಯರು, ಮತ್ತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದಿನಿಂದ ಒಂದು ವಾರಗಳ ಕಾಲ ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ ಸೆಪ್ಟೆಂಬರ್ 15ರಿಂದ 21ರವರೆಗೆ ಒಂದು ವಾರ ಕೊರೋನಾ ರಿಪೋರ್ಟ್ ಸಿಗೋದು ಡೌಟ್ ಆಗಿದೆ.