ಕಾಶ್ಮೀರದಲ್ಲಿ ಮುಜಾಹಿದ್ದೀನ್ ಸಂಘಟನೆಯ ಮೂವರು ಉಗ್ರರ ಬಂಧನ
ಜಮ್ಮು: ಕಾಶ್ಮೀರ ಕಣಿವೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ನೇಮಕಾತಿ ಘಟಕವನ್ನ ಪತ್ತೆ ಹಚ್ಚಿದ ಭದ್ರತ ಪಡೆ, ಮೂವರು ಉಗ್ರರನ್ನು ಬಂಧಿಸಿದ್ದಾರೆ.
ಮಧ್ಯ ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ. ಎಲ್ಲರೂ ಗಂಡರ್ಬಾಲ್ ನಿವಾಸಿಗಳಾಗಿದ್ದು, ಪಾಕಿಸ್ತಾನದ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರೆಂಬ ಮಾಹಿತಿ ಲಭ್ಯವಾಗಿದೆ.
ಬಂಧಿತರನ್ನು ಅರ್ಶಿದ್ ಅಹ್ಮದ್ ಖಾನ್, ಮಜೀದ್ ರಸೂಲ್ ರಾಥರ್ ಮತ್ತು ಮೊಹಮ್ಮದ್ ಆಸಿಫ್ ನಜರ್ ಎಂದು ಗುರುತಿಸಲಾಗಿದ್ದು, ಇವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಫಯಾಜ್ ಖಾನ್ನೊಂದಿಗೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ದಾಳಿ ನಡೆಸಿದ್ದವು.
ಪೊಲೀಸ್ ಮತ್ತು 5 ಆರ್ಆರ್ ತಂಡಗಳು ಜಂಟಿ ಕಾರ್ಯಾಚರಣೆಯನ್ನು ನಡೆಸಿದವು. ಆರೋಪಿಗಳಿಂದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಹಾಗೂ ಮೂರು ಹ್ಯಾಂಡ್ ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇವರ ಸಂಪರ್ಕದಲ್ಲಿ ಇತರ ಯುವಕರು ಇದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.