ಕರಾವಳಿ
ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮರದ ಕೆತ್ತನೆ ಕೆಲಸದ ಮುಹೂರ್ತ

ಜೀರ್ಣೋದ್ಧಾರಗೊಳ್ಳುತ್ತಿರುವ ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಲ್ಲಿ ಇಂದು ದಿನಾಂಕ 19-09-2021 ರಂದು ನಡೆದ ಮರದ ಕೆತ್ತನೆ ಕೆಲಸದ ಮುಹೂರ್ತದಲ್ಲಿ ಶಾಸಕರು, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಜೆರ್ರಿ ವಿನ್ಸೆಂಟ್ ಡಯಾಸ್, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾll ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಉದ್ಯಮಿಗಳಾದ ಸುಭಾಷ್ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.