ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ : ಹಲವು ಕಡೆಗಳಲ್ಲಿ ಹಾನಿ….

ಉಡುಪಿ ಸೆ. 20 : ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯಾಗಿದೆ. ಮಧ್ಯಾಹ್ನದ ನಂತರ ಬಿರುಸು ಪಡೆದುಕೊಂಡಿದೆ. ರಾತ್ರಿ ವೇಳೆ ಅತಿಯಾದ ಮಳೆಯಿಂದಾಗಿ ಉಡುಪಿ ನಗರದ ಕೃಷ್ಣ ಮಠದ ಬಳಿ, ಬೈಲಕೆರೆ, ಕಲ್ಸಂಕ, ಬನ್ನಂಜೆ, ಕಲ್ಮಾಡಿ, ಕಿನ್ನಿಮೂಲ್ಕಿ, ಉದ್ಯವಾರ, ಹಾಗೂ ಇನ್ನೂ ಇತರ ಪರಿಸರದಲ್ಲಿ ಸಂಪೂರ್ಣವಾಗಿ ಜಲಾವೃತ ಗೊಂಡಿದೆ. ಭಾರೀ ಮಳೆಯಿಂದಾಗಿ ಕೃತಕ ನೆರೆಯುಂಟಾಗಿ ಉಡುಪಿ ಜಿಲ್ಲೆಯ ಕೆಲವು ಪ್ರದೇಶದಲ್ಲಿನ ವಾಸ್ತವ್ಯದ ಮನೆಗಳಿಗೆ ನೀರು ನುಗ್ಗಿದೆ ಎನ್ನಲಾಗಿದೆ. ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

ಬಂಗಾಲ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಕರಾವಳಿ ಭಾಗದಲ್ಲಿ ಮುಂಗಾರು ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ದಿನವಿಡೀ ಭಾರೀ ಮಳೆಯಾಗಿದೆ. ಮುಂಗಾರು ಮೋಡಗಳ ಚಲನೆಗೆ ಪೂರಕ ವಾತಾವರಣ ಇದ್ದು, ಸೆ. 19ರಿಂದ 21ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೂರು ದಿನ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಸೆ. 20, 21 ಮತ್ತು 22ರಂದು ರೆಡ್‌ ಹಾಗೂ ಸೆ. 23ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶನಿವಾರ ದಿನವಿಡೀ ಭಾರೀ ಮಳೆಯಾಗಿದ್ದು, ಕೆಲವೆಡೆ ಹಾನಿಯೂ ಸಂಭವಿಸಿದೆ ಎಂದು ತಿಳಿದು ಬಂದಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!