
ಬೆಂಗಳೂರು.ಸೆ. 23 ; ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ (65 ) ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 15 ದಿನಗಳ ಹಿಂದೆ ತಮಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಸ್ವತಃ ಅವರೇ ಟ್ವೀಟ್ ಮಾಡಿದ್ದು ನಾನು ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದು ಯಾರೂ ಕೂಡ ಆತಂಕ ಪಡಬೇಕಾಗಿಲ್ಲ ಶೀಘ್ರವಾಗಿ ಗುಣಮುಖರಾಗಿ ಬರುತ್ತೇನೆ ಎಂದು ತಿಳಿಸಿದ್ದರು.
ನಾನು #Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.
ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.@PMOIndia
— Suresh Angadi (@SureshAngadi_) September 11, 2020