
ಗ್ರಾಮೀಣ ಭಾಗಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ್ ಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಂಬಂಧ ಯೋಜನೆಯ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಇಂದು ದಿನಾಂಕ 17-07-2021 ರಂದು ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಇಲಾಖಾಧಿಕಾರಿಗಳ ಜೊತೆ ಚರ್ಚಿಸಿ ಕಾಮಗಾರಿಯನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರಲು ಆಯಾ ಪಂಚಾಯತ್ ಅಧ್ಯಕ್ಷರುಗಳು ಸದಸ್ಯರನ್ನು ಒಗ್ಗೂಡಿಸಿ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ಜಲ್ ಜೀವನ್ ಮಿಷನ್ ಯೋಜನೆಯಡಿ ಉಡುಪಿ ನಗರಸಭೆಯ 35 ವಾರ್ಡ್ ಗಳಿಗೆ ಹಾಗೂ ಇದಕ್ಕೆ ಹೊಂದಿಕೊಂಡಿರುವ ಗ್ರಾಮ ಪಂಚಾಯತ್ ಗಳಿಗೆ ಕುಡಿಯುವ ನೀರು ಪೂರೈಸಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರರಾದ ಹೆಬಸೂರ್, ಕೆ.ಯು.ಐ.ಡಿ.ಎಫ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉಮಾಶಂಕರ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.