
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಕುರಿತು ಇಂದು ದಿನಾಂಕ 24-09-2020 ರಂದು ಮಾನ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರಾದ ಶಿವರಾಮ್ ಹೆಬ್ಬಾರ್ ಅವರೊಂದಿಗೆ ಶಾಸಕ ಕೆ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು.

ರೈತರ ಬೇಡಿಕೆಯಂತೆ ಸಕ್ಕರೆ ಕಾರ್ಖಾನೆಯನ್ನು ಗ್ಲೋಬಲ್ ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಿ ಸಕ್ಕರೆ ಕಾರ್ಖಾನೆಯನ್ನು ಆರಂಭಿಸುವ ಬಗ್ಗೆ ಸಚಿವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.
ಶಾಸಕರ ಬೇಡಿಕೆಯಂತೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ತಕ್ಷಣದಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.